Versions
KNV ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು.
ERVKN ಮರುದಿನ ಮುಂಜಾನೆ, ಅಬ್ರಹಾಮನು ಸ್ವಲ್ಪ ಆಹಾರವನ್ನು ಮತ್ತು ಸ್ವಲ್ಪ ನೀರನ್ನು ತೆಗೆದು ಹಾಗರಳಿಗೆ ಕೊಟ್ಟನು. ಹಾಗರಳು ಅವುಗಳನ್ನು ತೆಗೆದುಕೊಂಡು ತನ್ನ ಮಗನೊಡನೆ ಅಲ್ಲಿಂದ ಹೊರಟುಹೋದಳು. ಹಾಗರಳು ಆ ಸ್ಥಳವನ್ನು ಬಿಟ್ಟು ಬೇರ್ಷೆಬದ ಮರಳುಗಾಡಿನಲ್ಲಿ ಅಲೆಯತೊಡಗಿದಳು.
IRVKN ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು. PEPS