Versions
KNV ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.
ERVKN ಸಹಾಯಕ್ಕಾಗಿ ಈಜಿಪ್ಟಿಗೆ ಹೋಗುವ ಜನರನ್ನು ನೋಡಿರಿ. ಆ ಜನರು ಕುದುರೆಗಳಿಗಾಗಿ ಕೇಳುತ್ತಿದ್ದಾರೆ. ಕುದುರೆಗಳು ಅವರನ್ನು ರಕ್ಷಿಸುತ್ತವೆ ಎಂದು ಅವರು ಭಾವಿಸುತ್ತಾರೆ. ಈಜಿಪ್ಟಿನ ಬಹಳ ರಥಗಳು ಮತ್ತು ಬಹಳ ಕುದುರೆಗಳು ಅವರನ್ನು ಕಾಪಾಡುವವು ಎಂದು ಜನರು ತಿಳಿದುಕೊಳ್ಳುತ್ತಾರೆ. ಸೈನ್ಯವು ದೊಡ್ಡದಾಗಿರುವದರಿಂದ ಯಾವ ಅಪಾಯವೂ ಬಾರದು ಎಂದು ಅವರು ತಿಳಿದುಕೊಳ್ಳುತ್ತಾರೆ. ಜನರು ಇಸ್ರೇಲಿನ ಪರಿಶುದ್ಧನನ್ನು ನಂಬುವದಿಲ್ಲ. ಅವರು ಯೆಹೋವನ ಸಹಾಯವನ್ನು ಕೋರುವದಿಲ್ಲ.
IRVKN {ಯೆಹೋವನೇ ಯೆಹೂದ್ಯರಿಗೆ ನಿಜವಾದ ರಕ್ಷಕ} PS ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ!
ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ.
ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.