Versions
KNV ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು.
ERVKN ನನ್ನ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ನಾನು ಜನಾಂಗಗಳಿಗೆ ಕೈಬೀಸಿ ಸನ್ನೆ ಮಾಡುವೆನು. ಎಲ್ಲಾ ಜನರು ನೋಡುವಂತೆ ನಾನು ನನ್ನ ಧ್ವಜವನ್ನು ಎತ್ತುವೆನು. ಆಗ ಅವರು ನಿನ್ನ ಮಕ್ಕಳನ್ನು ನಿನಗೆ ತಂದೊಪ್ಪಿಸುವರು. ಅವರು ನಿನ್ನ ಮಕ್ಕಳನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ತರುವರು. ತಮ್ಮ ಕೈಗಳಲ್ಲಿ ಅವರನ್ನು ಎತ್ತಿಕೊಂಡು ಬರುವರು.
IRVKN ಕರ್ತನಾದ ಯೆಹೋವನು ಹೀಗೆನ್ನುತ್ತಾನೆ,
“ಇಗೋ, ನಾನು ಜನಾಂಗಗಳಿಗೆ ಕೈಸನ್ನೆಮಾಡಿ ದೇಶಾಂತರಗಳಿಗೆ ನನ್ನ ಧ್ವಜವನ್ನು ಎತ್ತುವೆನು.
ಅವರು ನಿನ್ನ ಕುಮಾರರನ್ನು ಎದೆಗಪ್ಪಿಕೊಂಡು ಬರುವರು. ನಿನ್ನ ಕುಮಾರ್ತೆಯರನ್ನು ಹೆಗಲ ಮೇಲೆ ಕರೆದುತರುವರು.