Bible Versions
Bible Books

Isaiah 54:11 (KJVP) King James Version with Strong Number

Versions

KNV   ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು.
ERVKN   ಬಡನಗರಿಯೇ, ನಿನ್ನ ವೈರಿಗಳು ನಿನಗೆ ವಿರೋಧವಾಗಿ ಬಿರುಗಾಳಿಯಂತೆ ಬಂದಾಗ ಯಾರೂ ನಿನ್ನನ್ನು ಸಂತೈಸಲಿಲ್ಲ. ಆದರೆ ನಾನು ಮತ್ತೆ ನಿನ್ನನ್ನು ನಿರ್ಮಿಸುವೆನು. ನಿನ್ನ ಗೋಡೆಗಳ ಕಲ್ಲುಗಳನ್ನು ಕಟ್ಟಲು ಸುಂದರವಾದ ಗಾರೆಯನ್ನು ಉಪಯೋಗಿಸುವೆನು. ನಾನು ಅಡಿಪಾಯ ಹಾಕುವಾಗ ಮಾಣಿಕ್ಯಗಳನ್ನು ಹಾಕುವೆನು.
IRVKN   ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ,
ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ, ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us