Versions
KNV ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಓ ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು.
ERVKN ಆಗ ಆ ಜನರು ಯೆಹೋವನಿಗೆ, “ಯೆಹೋವನೇ, ಈ ಮನುಷ್ಯನು ಕೆಟ್ಟ ಕಾರ್ಯಮಾಡಿದ್ದರಿಂದ ನಾವು ಇವನನ್ನು ಸಮುದ್ರಕ್ಕೆ ಬಿಸಾಡುತ್ತೇವೆ. ನಾವು ಒಬ್ಬ ನಿರಪರಾಧಿಯನ್ನು ಕೊಂದೆವು ಎಂಬ ಅಪರಾಧವನ್ನು ನಮ್ಮ ಮೇಲೆ ಹೊರಿಸಬೇಡ. ಅವನನ್ನು ಕೊಂದದ್ದಕ್ಕಾಗಿ ನಮ್ಮನ್ನು ಕೊಲ್ಲಬೇಡ. ನೀನು ಯೆಹೋವನೆಂದು ನಮಗೆ ಗೊತ್ತಿದೆ. ನಿನಗೆ ಇಷ್ಟಬಂದದ್ದನ್ನು ನೀನು ನೆರವೇರಿಸುತ್ತೀ. ಆದುದರಿಂದ ದಯವಿಟ್ಟು ನಮಗೆ ಕರುಣೆ ತೋರಿಸು” ಅಂದರು.
IRVKN ಹೀಗಿರಲು, ಅವರು ಸಹ ಯೆಹೋವನಿಗೆ ಮೊರೆಯಿಟ್ಟು, “ಯೆಹೋವನೇ, ಈ ಮನುಷ್ಯನ ಪ್ರಾಣನಷ್ಟದಿಂದ ಆಗುವ ಕೇಡು ನಮ್ಮ ಮೇಲೆ ಬಾರದಿರಲಿ; ನಿರಪರಾಧಿಯನ್ನು ಕೊಂದ ದೋಷಕ್ಕೆ ನಮ್ಮನ್ನು ಗುರಿಮಾಡಬೇಡ; ಯೆಹೋವನೇ, ನೀನೇ ನಿನ್ನ ಚಿತ್ತಾನುಸಾರವಾಗಿ ಇದನ್ನು ಮಾಡಿದ್ದಿಯಲ್ಲಾ” ಎಂದು ಬಿನ್ನವಿಸಿದರು.