Versions
KNV ನಿಮ್ಮ ಸ್ವಾಸ್ತ್ಯದ ದೇಶವು ಅಶುದ್ಧ ವಾಗಿದ್ದರೆ ಕರ್ತನ ಗುಡಾರವಿರುವ ಕರ್ತನ ಸ್ವಾಸ್ತ್ಯದ ದೇಶಕ್ಕೆ ನೀವು ದಾಟಿ ಬಂದು ನಮ್ಮ ಮಧ್ಯದಲ್ಲಿ ಸ್ವಾಸ್ತ್ಯವನ್ನು ತೆಗೆದುಕೊಳ್ಳಿರಿ. ಕರ್ತನ ಬಲಿಪೀಠದ ಹೊರತಾಗಿ ನಿಮಗೋಸ್ಕರ ಒಂದು ಬಲಿಪೀಠವನ್ನು ಕಟ್ಟಿಕೊಳ್ಳುವದರಿಂದ ನೀವು ಕರ್ತನಿಗೂ ನಮಗೂ ವಿರೋಧವಾಗಿ ತಿರುಗಿಬೀಳಬೇಡಿರಿ;
ERVKN “ನಿಮ್ಮ ಪ್ರದೇಶವು ದೇವಾರಾಧನೆ ಮಾಡಲು ಅಶುದ್ಧವಾಗಿದ್ದರೆ ನಮ್ಮ ಪ್ರದೇಶಕ್ಕೆ ಬಂದುಬಿಡಿ. ಯೆಹೋವನ ಗುಡಾರವು ನಮ್ಮ ಪ್ರದೇಶದಲ್ಲಿದೆ. ನೀವು ನಮ್ಮ ಸ್ವಲ್ಪ ಭೂಮಿಯನ್ನು ತೆಗೆದುಕೊಂಡು ಅಲ್ಲಿ ವಾಸವಾಗಿರಬಹುದು. ಆದರೆ ಯೆಹೋವನಿಗೆ ವಿರುದ್ಧವಾಗಿ ಹೋಗಬೇಡಿ. ಬೇರೊಂದು ಯಜ್ಞವೇದಿಕೆಯನ್ನು ಕಟ್ಟಬೇಡಿ. ದೇವದರ್ಶನಗುಡಾರದಲ್ಲಿ ನಾವು ಈಗಾಗಲೇ ಯೆಹೋವನಾದ ನಮ್ಮ ದೇವರ ಯಜ್ಞವೇದಿಕೆಯನ್ನು ಹೊಂದಿದ್ದೇವೆ.
IRVKN ನಿಮ್ಮ ದೇಶವು ಅಶುದ್ಧವಾಗಿದೆ ಎಂದು ತೋರಿದರೆ ಯೆಹೋವನ ಗುಡಾರವಿರುವ ಆತನ ಸ್ವಂತ ಸೀಮೆಗೆ ಬಂದು ನಮ್ಮ ಮಧ್ಯದಲ್ಲಿರುವ ಸ್ವತ್ತನ್ನು ತೆಗೆದುಕೊಳ್ಳಿ. ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಹೊರತು ನಿಮಗೋಸ್ಕರ ಇನ್ನೊಂದನ್ನು ಕಟ್ಟಿಕೊಂಡು ಯೆಹೋವನಿಗೂ ನಮಗೂ ವಿರೋಧವಾಗಿ ತಿರುಗಿ ಬೀಳಬೇಡಿರಿ.