Bible Versions
Bible Books

Joshua 22:25 (KJVP) King James Version with Strong Number

Versions

KNV   ರೂಬೇನನ ಮಕ್ಕಳೇ, ಗಾದನ ಮಕ್ಕಳೇ, ಕರ್ತನು ನಿಮಗೂ ನಮಗೂ ಯೊರ್ದನನ್ನು ಮೇರೆ ಮಾಡಿದ್ದರಿಂದ ಕರ್ತನ ಕಾರ್ಯಗಳಲ್ಲಿ ನಿಮಗೆ ಭಾಗವು ಇಲ್ಲವೆಂದು ಹೇಳಿ ನಮ್ಮಲ್ಲಿ ನಿಮಗೆ ಭಾಗವು ಇಲ್ಲ ವೆಂದು ಹೇಳಿ ನಮ್ಮ ಮಕ್ಕಳನ್ನು ಕರ್ತನಿಗೆ ಭಯಪಡದ ಹಾಗೆ ಮಾಡುವರೆಂದು ಅಂಜಿಕೊಂಡು ಇದನ್ನು ಮಾಡಿದೆವು;
ERVKN   ದೇವರು ನಮಗೆ ಜೋರ್ಡನ್ ನದಿಯ ಮತ್ತೊಂದು ದಡದಲ್ಲಿ ಭೂಮಿಯನ್ನು ಕೊಟ್ಟಿದ್ದಾನೆ. ಅಂದರೆ ಜೋರ್ಡನ್ ನದಿಯು ನಮ್ಮನ್ನು ಬೇರ್ಪಡಿಸುತ್ತದೆ. ನಿಮ್ಮ ಮಕ್ಕಳು ದೊಡ್ಡವರಾಗಿ ನಿಮ್ಮ ಭೂಮಿಯನ್ನು ಆಳುವಾಗ, ನಾವು ನಿಮ್ಮ ಜನರೆಂಬುದನ್ನು ಮರೆತು ಬಿಡಬಹುದು. ‘ರೂಬೇನ್ಯರು, ಗಾದ್ಯರು ಆದ ನೀವು ಇಸ್ರೇಲಿನ ಅಂಗವಾಗಿಲ್ಲ’ ಎಂದು ಹೇಳಿ ನಮ್ಮ ಮಕ್ಕಳು ಯೆಹೋವನನ್ನು ಆರಾಧಿಸದಂತೆ ನಿಮ್ಮ ಮಕ್ಕಳು ತಡೆಯಬಹುದು.
IRVKN   ರೂಬೇನ್ಯರೇ, ಗಾದ್ಯರೇ, ಯೆಹೋವನು ನಿಮಗೂ ನಮಗೂ ನಡುವೆ ಯೊರ್ದನ್ ನದಿಯನ್ನು ಮೇರೆಯಾಗಿ ಇಟ್ಟಿದ್ದಾನೆ. ಯೆಹೋವನಲ್ಲಿ ನಿಮಗೆ ಯಾವ ಪಾಲೂ ಇಲ್ಲ ಎಂದು ಹೇಳಿ ನಿಮ್ಮ ಮಕ್ಕಳು ನಮ್ಮ ಮಕ್ಕಳನ್ನು ದೈವಭಕ್ತಿಯಿಂದ ಬೇರ್ಪಡಿಸಿಯಾರೆಂದು ಭಯಪಟ್ಟೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us