Bible Versions
Bible Books

Joshua 22:9 (KJVP) King James Version with Strong Number

Versions

KNV   ಕರ್ತನು ಮೋಶೆಗೆ ಕೊಟ್ಟ ಮಾತಿನ ಪ್ರಕಾರ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರದವರೂ ತಾವು ವಶಮಾಡಿಕೊಂಡ ತಮ್ಮ ಸ್ವಾಸ್ತ್ಯದ ದೇಶವಾಗಿರುವ ಗಿಲ್ಯಾದ್‌ ದೇಶಕ್ಕೆ ಹೋಗುವದಕ್ಕೆ ಕಾನಾನ್‌ ದೇಶದಲ್ಲಿರುವ ಶೀಲೋ ವನ್ನೂ ಇಸ್ರಾಯೇಲ್‌ ಮಕ್ಕಳನ್ನೂ ಬಿಟ್ಟು ತಿರಿಗಿ ಹೋದರು.
ERVKN   ಆದುದರಿಂದ ರೂಬೇನ್ ಕುಲದವರು, ಗಾದ್ಯರು, ಮನಸ್ಸೆಕುಲದ ಅರ್ಧಜನರು ಇಸ್ರೇಲಿನ ಬೇರೆ ಕುಲದ ಜನರನ್ನು ಬಿಟ್ಟು ಹೊರಟರು. ಅವರು ಕಾನಾನಿನ ಶೀಲೋವಿನಲ್ಲಿದ್ದರು. ಅವರು ಸ್ಥಳವನ್ನು ಬಿಟ್ಟು ಗಿಲ್ಯಾದ್‌ಗೆ ಹಿಂದಿರುಗಿ ಹೋದರು. ಮೋಶೆಯು ಅವರಿಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದ ತಮ್ಮ ಪ್ರದೇಶಕ್ಕೆ ಅವರು ಹೋದರು. ಅವರಿಗೆ ಪ್ರದೇಶವನ್ನು ಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನು.
IRVKN   ಆಗ ರೂಬೇನ್ಯರೂ ಗಾದ್ಯರೂ ಮನಸ್ಸೆ ಕುಲದ ಅರ್ಧ ಜನರೂ ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲರನ್ನು ಬಿಟ್ಟು ಯೆಹೋವನ ಆಜ್ಞೆಗನುಸಾರವಾಗಿ ಮೋಶೆಯಿಂದ ತಮಗೆ ಸಿಕ್ಕಿದ ಸ್ವತ್ತಾದ ಗಿಲ್ಯಾದ್ ದೇಶಕ್ಕೆ ಹೊರಟು ಹೋದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us