Versions
KNV ನ್ಯಾಯ ತೀರ್ಪಿ ನಲ್ಲಿ ದಕ್ಷಿಣದ ರಾಣಿಯು ಈ ಸಂತತಿ ಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕೆ ಭೂಮಿಯ ಕಟ್ಟಕಡೆಯ ಭಾಗಗಳಿಂದ ಬಂದಳು; ಮತ್ತು ಇಗೋ, ಸೊಲೊಮೋನನಿಗಿಂತಲೂ ಹೆಚ್ಚಿನವನು ಇಲ್ಲಿದ್ದಾನೆ.
ERVKN ನ್ಯಾಯತೀರ್ಪಿನ ದಿನದಲ್ಲಿ ದಕ್ಷಿಣ ದೇಶದ ರಾಣಿಯು ಈ ಪೀಳಿಗೆಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು. ಏಕೆಂದರೆ ಆ ರಾಣಿಯು ಬಹುದೂರದಿಂದ ಸೊಲೊಮೋನನ ಜ್ಞಾನಬೋಧನೆಯನ್ನು ಕೇಳಲು ಬಂದಳು. ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಾನು ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ!
IRVKN ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆ ದಿನದಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವಳು. ಆಕೆಯು ಸೊಲೊಮೋನನ ಜ್ಞಾನವನ್ನು ತಿಳಿದುಕೊಳ್ಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಆದರೆ ಇಗೋ, ಸೊಲೊಮೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ.