Versions
KNV ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
ERVKN ಯೇಸು ಅವರಿಗೆ, “ನಾನು ಮೊದಲು ನಿಮ್ಮ ಸಂಗಡ ಇದ್ದುದನ್ನು ಜ್ಞಾಪಕಮಾಡಿಕೊಳ್ಳಿರಿ. ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವಾದಿಗಳ ಗ್ರಂಥಗಳಲ್ಲಿ, ಕೀರ್ತನೆಗಳಲ್ಲಿ ಬರೆದಿರುವ ಪ್ರತಿಯೊಂದು ಸಂಗತಿಯೂ ನೆರವೇರಬೇಕಾಗಿದೆ ಎಂದು ನಾನು ಹೇಳಿದೆನು” ಅಂದನು.
IRVKN ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು.