Versions
KNV ಯಾಜಕನು ಶಾಪದ ಪ್ರಮಾಣ ದಿಂದ ಆ ಸ್ತ್ರೀಗೆ ಹೇಳಬೇಕಾದದ್ದೇನಂದರೆ--ಕರ್ತನು ನಿನ್ನ ತೊಡೆಯನ್ನು ಕ್ಷೀಣವಾಗುವಂತೆಯೂ ನಿನ್ನ ಹೊಟ್ಟೆಯನ್ನು ಉಬ್ಬುವಂತೆಯೂ ಮಾಡುವದರಿಂದ ಕರ್ತನು ನಿನ್ನನ್ನು ನಿನ್ನ ಜನರೊಳಗೆ ಶಾಪವನ್ನಾಗಿಯೂ ದೂಷಣೆಯನ್ನಾಗಿಯೂ ಇಡಲಿ.
ERVKN ಆದ್ದರಿಂದ ನೀನು ಈ ವಿಶೇಷ ಜಲವನ್ನು ಕುಡಿಯುವಾಗ, ನಿನಗೆ ಹಾನಿಯುಂಟಾಗುವುದು. ನಿನಗೆ ಮಕ್ಕಳಾಗುವುದಿಲ್ಲ. ನೀನು ಬಸುರಾಗಿದ್ದರೆ, ನಿನ್ನ ಮಗು ಸಾಯುವುದು. ಆಗ ನಿನ್ನ ಜನರು ನಿನ್ನನ್ನು ದೂರಮಾಡಿ ನಿನ್ನ ವಿರುದ್ಧವಾಗಿ ಕೆಟ್ಟ ಸಂಗತಿಗಳನ್ನು ಹೇಳುವರು.’ “ಬಳಿಕ ಯಾಜಕನು ಆ ಸ್ತ್ರೀಗೆ ಪ್ರಮಾಣ ಮಾಡಲು ಹೇಳಬೇಕು. ಅವಳು, ‘ನಾನು ಸುಳ್ಳಾಡಿದ್ದರೆ, ಈ ಕೆಟ್ಟ ಸಂಗತಿಗಳು ನನಗೆ ಸಂಭವಿಸಲಿ’ ಎಂದು ಹೇಳಬೇಕು.
IRVKN “ಯೆಹೋವನು ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ, ನಿನ್ನ * ಗರ್ಭಸ್ರಾವ ಅಥವಾ ಬಂಜೆ. ಹೊಟ್ಟೆಯು ಉಬ್ಬುವಂತೆ ಮಾಡಿ ನಿನ್ನನ್ನು ನಿನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳನ್ನಾಗಿ ನೇಮಿಸಲಿ.