Versions
KNV ಆದರೆ ದಾವೀದನು--ಅಡವಿ ಯಲ್ಲಿದ್ದ ಇವನ ಎಲ್ಲಾದರಲ್ಲಿ ಒಂದಾದರೂ ಕಳಕೊಳ್ಳದ ಹಾಗೆ ನಾನು ಕಾಪಾಡಿದ್ದು ವ್ಯರ್ಥವಾಯಿತು. ಆದರೆ ನಾನು ಮಾಡಿದ ಉಪಕಾರಕ್ಕೆ ಬದಲಾಗಿ ಈಗ ಅವನು ನನಗೆ ಅಪಕಾರ ಮಾಡಿದ್ದಾನೆ.
ERVKN ಅಬೀಗೈಲಳನ್ನು ಸಂಧಿಸುವುದಕ್ಕೆ ಮುಂಚೆ ದಾವೀದನು, “ನಾಬಾಲನ ಆಸ್ತಿಯನ್ನು ನಾನು ಅರಣ್ಯದಲ್ಲಿ ಕಾಪಾಡಿದೆನು. ಅವನ ಕುರಿಗಳಲ್ಲಿ ಒಂದೂ ತಪ್ಪಿಸಿಕೊಳ್ಳದಂತೆ ನಾನು ನೋಡಿಕೊಂಡೆನು. ನಾನು ಅವನಿಂದ ಏನನ್ನೂ ಅಪೇಕ್ಷಿಸದೆ ಇದನ್ನೆಲ್ಲ ಮಾಡಿದೆ! ನಾನು ಅವನಿಗೆ ಒಳ್ಳೆಯದನ್ನು ಮಾಡಿದೆ; ಆದರೆ ಅವನು ನನಗೆ ಕೆಟ್ಟವನಾದನು.
IRVKN ಅಷ್ಟರಲ್ಲಿ ದಾವೀದನು, “ನಾನು ಮರುಭೂಮಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥವಾಯಿತು. ಅವನು ಉಪಕಾರಕ್ಕೆ ಅಪಕಾರ ಮಾಡಿದನು.