Versions
KNV ಆಗ ಆ ಸ್ತ್ರೀಯು ಅವನ ಬಳಿಗೆ ಬಂದು ಅವನು ಬಹಳ ತಲ್ಲಣ ಪಟ್ಟನೆಂದು ನೋಡಿ ಅವನಿಗೆ--ಇಗೋ, ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿ ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಇಟ್ಟುಕೊಂಡೆನು; ನೀನು ನನಗೆ ಹೇಳಿದ ಮಾತುಗಳನ್ನು ಕೇಳಿದೆನು.
ERVKN ಆ ಹೆಂಗಸು ಸೌಲನ ಬಳಿಗೆ ಬಂದಳು. ಸೌಲನು ನಿಜವಾಗಿಯೂ ಭಯಗೊಂಡಿರುವುದನ್ನು ಅವಳು ನೋಡಿ, “ಇಲ್ಲಿ ನೋಡು, ನಾನು ನಿನ್ನ ಸೇವಕಿ. ನಾನು ನಿನಗೆ ವಿಧೇಯಳಾಗಿದ್ದೇನೆ. ನಾನು ನನ್ನ ಜೀವವನ್ನೇ ಕಡೆಗಣಿಸಿ ನೀನು ಹೇಳಿದ್ದನ್ನು ಮಾಡಿದೆ.
IRVKN ಆ ಸ್ತ್ರೀಯು ಸೌಲನ ಹತ್ತಿರ ಬಂದು ಅವನು ಬಹು ಭೀತನಾಗಿದ್ದಾನೆಂದು ಕಂಡು ಅವನಿಗೆ, “ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿದೆನು. ಕೈಯಲ್ಲಿ ಜೀವಹಿಡಿದವಳಾಗಿ ನಿನ್ನ ಅಪ್ಪಣೆಯನ್ನು ನೆರವೇರಿಸಿದೆನು.