Versions
KNV ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.
ERVKN ಮುಂಜಾನೆಯಲ್ಲಿ ನೀವು, ‘ಇದು ಸಾಯಂಕಾಲವಾಗಿದ್ದರೆ ಉತ್ತಮವಾಗಿರುತ್ತಿತ್ತು’ ಎಂದು ಅನ್ನುವಿರಿ. ಸಾಯಂಕಾಲದಲ್ಲಿ, ‘ಇದು ಮುಂಜಾನೆಯಾಗಿದ್ದರೆ ಉತ್ತಮವಾಗಿರುತ್ತಿತ್ತು’ ಎಂದು ಅನ್ನುವಿರಿ. ನಿಮ್ಮ ಹೃದಯದಲ್ಲಿರುವ ಭಯ ಮತ್ತು ನೀವು ಕಣ್ಣಾರೆ ಕಾಣುವ ಭಯಂಕರ ಸಂಗತಿಗಳೇ ಇದಕ್ಕೆ ಕಾರಣ.
IRVKN ಮನಸ್ಸಿನಲ್ಲಿ ಯಾವಾಗಲೂ ಪ್ರಾಣಭಯವಿರುವುದರಿಂದಲೂ ಕಣ್ಣಿನಿಂದ ಭಯಂಕರವಾದ ಸಂಗತಿಗಳನ್ನು ನೋಡುವುದರಿಂದಲೂ ನೀವು ಹೊತ್ತಾರೆಯಲ್ಲಿ, “ಅಯ್ಯೋ, ಅಯ್ಯೋ ಸಾಯಂಕಾಲ ಯಾವಾಗ ಬರುವುದೋ” ಎಂದೂ, ಸಾಯಂಕಾಲದಲ್ಲಿ, “ಅಯ್ಯೋ, ಅಯ್ಯೋ! ಬೆಳಿಗ್ಗೆ ಯಾವಾಗ ಬರುವುದೋ” ಎಂದು ಕೊರಗುವಿರಿ.