Bible Versions
Bible Books

Joshua 10:10 (KNV) Kannadam Old BSI Version

Versions

KNV   ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್‌ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು.
ERVKN   ಇಸ್ರೇಲರು ಧಾಳಿಮಾಡಿದಾಗ ಯೆಹೋವನು ಶತ್ರು ಸೈನ್ಯವನ್ನು ಗಾಬರಿಗೊಳಿಸಿದನು. ಆದುದರಿಂದ ಇಸ್ರೇಲಿನ ಸೈನಿಕರು ಅವರನ್ನು ಸೋಲಿಸಿ ಮಹಾವಿಜಯವನ್ನು ಸಾಧಿಸಿದರು. ಇಸ್ರೇಲರು ಶತ್ರುಗಳನ್ನು ಗಿಬ್ಯೋನಿನಿಂದ ಬೇತ್‌ಹೋರೋನಿಗೆ ಹೋಗುವ ದಾರಿಯವರೆಗೂ ಬೆನ್ನಟ್ಟಿದರು. ಇಸ್ರೇಲರು ಅಜೇಕ ಮತ್ತು ಮಕ್ಕೇದದವರೆಗೆ ಅವರನ್ನು ಕೊಂದರು.
IRVKN   ಅಮೋರಿಯರಲ್ಲಿ ಯೆಹೋವನು ಇಸ್ರಾಯೇಲರ ಕುರಿತಾಗಿ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್‌ಹೋರೋನ್ ಎಂಬ ಬೆಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us