Versions
KNV ಆಗ ಇಸ್ರಾಯೇಲಿನ ಅರಸನು ನಾನೂರು ಮಂದಿ ಪ್ರವಾದಿ ಗಳನ್ನು ಕೂಡಿಸಿ ಅವರಿಗೆ--ನಾವು ಗಿಲ್ಯಾದಿನಲ್ಲಿರುವ ರಾಮೋತಿಗೆ ಯುದ್ಧಕ್ಕೆ ಹೋಗಬಹುದೋ ಬಾರದೋ ಅಂದನು. ಅದಕ್ಕವರು--ಹೋಗು; ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
ERVKN ಆಗ ಅಹಾಬನು ನಾನೂರು ಮಂದಿ ಪ್ರವಾದಿಗಳನ್ನು ಒಟ್ಟಾಗಿ ಸೇರಿಸಿ ಅವರಿಗೆ, “ನಾವು ರಾಮೋತ್ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೊರಡಬೇಕೋ ಬೇಡವೋ?” ಎಂದು ಕೇಳಿದಾಗ ಆ ಪ್ರವಾದಿಗಳು ಅಹಾಬನಿಗೆ, “ಹೋಗು, ದೇವರು ರಾಮೋತ್ಗಿಲ್ಯಾದನ್ನು ಸೋಲಿಸುವಂತೆ ಮಾಡುವನು” ಎಂದು ಹೇಳಿದರು.
IRVKN ಅನಂತರ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಸೇರಿಸಿ, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಹೋಗಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವನು” ಎಂದರು.