Versions
KNV ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ಸಮಾಧಾನದಿಂದ ನಿನ್ನ ಸಮಾ ಧಿಗೆ ಸೇರಿಸಲ್ಪಡುವಿ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ನೋಡುವದಿಲ್ಲ ಎಂದು ಕರ್ತನು ಹೇಳುತ್ತಾನೆ ಎಂದು ಹೇಳಿದಳು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ಹೇಳಿದರು.
ERVKN ನಿನ್ನನ್ನು ನಿನ್ನ ಪೂರ್ವಿಕರ ಬಳಿಗೆ ತೆಗೆದುಕೊಳ್ಳುತ್ತೇನೆ. ನಿನ್ನ ಪ್ರಾರ್ಥನೆಯನ್ನು ನಾನು ಕೇಳಿದೆ. ನೀನು ನಿನ್ನ ಸಮಾಧಿಗೆ ಸಮಾಧಾನದಿಂದ ಸೇರುವೆ. ನಾನು ಈ ಸ್ಥಳದ ಮೇಲೂ ಈ ಸ್ಥಳದಲ್ಲಿ ವಾಸಿಸುವವರ ಮೇಲೂ ತರುವ ಸಂಕಟಗಳಲ್ಲಿ ನೀನು ಒಂದಾನ್ನಾದರೂ ಅನುಭವಿಸುವದಿಲ್ಲ.” ಹಿಲ್ಕೀಯನೂ ಅರಸನ ಸೇವಕರೂ ಈ ಸಂದೇಶವನ್ನು ಅರಸನಾದ ಯೋಷೀಯನಿಗೆ ತಂದರು.
IRVKN ನಾನು ಈ ದೇಶದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು ಎಂಬುದಾಗಿ ತಿಳಿಸಿದೆ ಎಂದು ಅರಸನಿಗೆ ತಿಳಿಸಿರಿ” ಎಂದು ಹೇಳಿದಳು.