Versions
KNV ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
ERVKN ‘ನೀನು ನಿನ್ನ ಪೂರ್ವಿಕರ ಜೊತೆ ಸೇರುವಂತೆ ನಾನು ಮಾಡುತ್ತೇನೆ. ನೀನು ಶಾಂತಿಯಿಂದ ಸತ್ತು ನಿನ್ನ ಸಮಾಧಿಯನ್ನು ಸೇರುವೆ. ಈ ದೇಶದ (ಜೆರುಸಲೇಮಿನ) ಮೇಲೆ ನಾನು ತರಲಿರುವ ಕೇಡುಗಳನ್ನು ನಿನ್ನ ಕಣ್ಣುಗಳು ನೋಡುವುದಿಲ್ಲ’ ಎಂಬುದೇ” ಎಂದು ಹೇಳಿದಳು. ನಂತರ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಹಿಂತಿರುಗಿ ಬಂದು ರಾಜನಿಗೆ ತಿಳಿಸಿದರು.
IRVKN ಆದುದರಿಂದ, ‘ನಾನು ಈ ದೇಶಕ್ಕೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಆಶೀರ್ವದಿಸುವೆನು’ ಎಂದು ಹೇಳಿದ್ದನ್ನು ತಿಳಿಸಿರಿ” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು. PE