Bible Versions
Bible Books

2 Kings 5:7 (LITV) Literal Translation of the Holy Bible

Versions

KNV   ಇಸ್ರಾಯೇಲ್ಯರ ಅರಸನು ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು--ಕೊಲ್ಲು ವದಕ್ಕೂ ಬದುಕಿಸುವದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ತಪ್ಪಿಸಿ ವಾಸಿಮಾಡುವದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧ ವಾಗಿ ಜಗಳಕ್ಕೆ ಕಾರಣ ಹುಡುಕುವದನ್ನು ನೀವು ನೋಡಿ ತಿಳುಕೊಳ್ಳಿರಿ ಅಂದನು.
ERVKN   ಇಸ್ರೇಲಿನ ರಾಜನು ಪತ್ರವನ್ನು ಓದಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, “ನಾನು ದೇವರೇನು? ಇಲ್ಲ! ಹುಟ್ಟು ಮತ್ತು ಸಾವುಗಳ ಮೇಲೆ ನನಗೆ ಯಾವ ಶಕ್ತಿಯೂ ಇಲ್ಲ. ಹೀಗಿರುವಾಗ ಅರಾಮ್ಯರ ರಾಜನು ಕುಷ್ಠರೋಗ ಪೀಡಿತನಾದ ಮನುಷ್ಯನನ್ನು ನನ್ನ ಬಳಿಗೆ ಗುಣಪಡಿಸಲು ಏಕೆ ಕಳುಹಿಸಿದನು? ಇದರ ಬಗ್ಗೆ ನೀವೇ ಯೋಚಿಸಿರಿ. ಇದು ಒಂದು ಕುತಂತ್ರವೆಂಬುದು ನಿಮಗೇ ತಿಳಿಯುತ್ತದೆ. ಅರಾಮ್ಯರ ರಾಜನು ಯುದ್ಧವನ್ನು ಆರಂಭಿಸಲು ಪ್ರಯತ್ನಿಸುತ್ತಿದ್ದಾನೆ!” ಎಂದು ಹೇಳಿದನು.
IRVKN   ಇಸ್ರಾಯೇಲರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ಅವನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ. ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನಮಾಡುವುದಕ್ಕಾಗಲಿ, ಸಾಯಿಸುವುದಕ್ಕಾಗಲಿ ನನಗೆ ಸಾಮರ್ಥ್ಯ ಉಂಟೋ? ಇವನು ನನ್ನೊಡನೆ ಜಗಳವಾಡುವುದಕ್ಕೆ ಕಾರಣ ಹುಡುಕುತ್ತಿದ್ದಾನಲ್ಲವೇ ನೀವೇ ಆಲೋಚಿಸಿ ನೋಡಿರಿ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us