Versions
KNV ಊರೀಯನು ದಾವೀದ ನಿಗೆ--ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ ದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ ನನ್ನ ಒಡೆಯನಾದ ಯೋವಾಬನೂ ನನ್ನ ಒಡೆಯನ ಸೇವ ಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವ ದಕ್ಕೂ ಕುಡಿಯುವದಕ್ಕೂ ನನ್ನ ಹೆಂಡತಿಯ ಸಂಗಡ ಮಲಗುವದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವದಿಲ್ಲ ಅಂದನು.
ERVKN ಊರೀಯನು ದಾವೀದನಿಗೆ, “ಪವಿತ್ರ ಪೆಟ್ಟಿಗೆಯೂ ಇಸ್ರೇಲಿನ ಮತ್ತು ಯೆಹೂದದ ಸೈನಿಕರೂ ಗುಡಾರಗಳಲ್ಲಿ ನೆಲೆಸಿದ್ದಾರೆ. ನನ್ನ ಒಡೆಯನಾದ ಯೋವಾಬನು ಮತ್ತು ನನ್ನ ರಾಜನ ಸೇವಕರು ಹೊಲದಲ್ಲಿ ಪಾಳೆಯ ಮಾಡಿಕೊಂಡಿದ್ದಾರೆ. ಆದ್ದರಿಂದ ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೂ ಪತ್ನಿಯ ಜೊತೆಯಲ್ಲಿ ಮಲಗುವುದಕ್ಕೂ ನಾನು ಮನೆಗೆ ಹೋಗುವುದು ಸರಿಯಲ್ಲ. ನಿನ್ನಾಣೆ, ನಿನ್ನ ಜೀವದಾಣೆ, ನಾನು ಇಂಥದನ್ನು ಮಾಡುವುದೇ ಇಲ್ಲ.” ಎಂದು ಹೇಳಿದನು.
IRVKN ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷವೂ, ಇಸ್ರಾಯೇಲ್ಯರೂ, ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ, ಅವನ ಸೇವಕರೂ ಬಯಲಿನಲ್ಲಿ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಾಗ ನಾನು ಮಾತ್ರ ನನ್ನ ಮನೆಗೆ ಹೋಗಿ ಊಟಮಾಡಿ, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದ್ದನ್ನು ಮಾಡುವುದೇ ಇಲ್ಲ” ಎಂದು ಉತ್ತರಕೊಟ್ಟನು.