Versions
KNV ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿ ದಾಗ ಏನಾಯಿತಂದರೆ ಇಗೋ, ಅರ್ಕೀಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹೊಯ್ದುಕೊಂಡು ಅವನನ್ನು ಎದುರುಗೊಳ್ಳಲು ಬಂದನು.
ERVKN ದಾವೀದನು ಬೆಟ್ಟದ ಮೇಲೆ ದೇವರನ್ನು ಆರಾಧಿಸಿದನು. ಆ ಸಮಯದಲ್ಲಿ ಅರ್ಕೀಯನಾದ ಹೂಷೈ ಎಂಬವನು ಅವನಲ್ಲಿಗೆ ಬಂದನು. ಹೂಷೈನ ಅಂಗಿಯು ಹರಿದಿತ್ತು. ಅವನ ತಲೆಯ ಮೇಲೆಲ್ಲಾ ಧೂಳಿತ್ತು.
IRVKN ಅವನು ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ ಅರ್ಕಿಯನಾದ ಹೂಷೈ ಎಂಬುವವನು ಅಂಗಿಯನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು, ಅರಸನ ಬಳಿಗೆ ಬಂದನು.