Versions
KNV ಆ ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗ
ERVKN ಆಗ ಒಬ್ಬ ಪವಿತ್ರನು ಮಾತನಾಡುವದನ್ನು ಕೇಳಿದೆ. ಮತ್ತೊಬ್ಬ ಪವಿತ್ರನು ಮೊದಲನೆಯ ಪವಿತ್ರನಿಗೆ ಉತ್ತರಿಸುವದನ್ನೂ ಕೇಳಿದೆ. ಮೊದಲನೆಯ ಪವಿತ್ರನು, “ಈ ದರ್ಶನ ನಿತ್ಯಹೋಮಗಳಿಗೆ ಏನಾಗುವದೆಂಬುದನ್ನು ತೋರಿಸುವದು. ಇದು ಆ ಭಯಾನಕ ಪಾಪದ ಕುರಿತಾಗಿದೆ. ಅಧಿಪತಿಯು ಆರಾಧಿಸಲ್ಪಡುವ ಪವಿತ್ರಾಲಯವನ್ನು ಜನರು ಹಾಳುಮಾಡಿದರೆ, ಜನರು ಆ ಸ್ಥಳವನ್ನು ತುಳಿದಾಡಿದರೆ, ಆ ನಕ್ಷತ್ರಗಳ ಮೇಲೆ ಜನರು ನಡೆದಾಡಿದರೆ ಏನಾಗುವದೆಂಬುದನ್ನು ಇದು ತೋರಿಸಿಕೊಡುತ್ತದೆ. ಆದರೆ ಇದೆಲ್ಲ ಎಷ್ಟು ದಿನ ನಡೆಯುವದು?” ಎಂದನು.
IRVKN ಆಗ ಒಬ್ಬ ದೇವದೂತನು ಮಾತನಾಡುವುದನ್ನು ಕೇಳಿದೆನು. ಮಾತನಾಡುವವನನ್ನು ಮತ್ತೊಬ್ಬ ದೇವದೂತನು, “ನಿತ್ಯಹೋಮವನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ, ದೇವಭಕ್ತ ಗಣವನ್ನು ತುಳಿಯುವುದು ಎಂಬ ಕನಸಿನ ಕಾರ್ಯಗಳು ಎಷ್ಟು ಕಾಲ ನಡೆಯುವುದು?” ಎಂದು ಪ್ರಶ್ನೆಮಾಡಿದನು.