Versions
KNV ಅದು ಟಗರಿನ ಹತ್ತಿರ ಬರುವದನ್ನು ನಾನು ನೋಡಿದೆನು. ಅದರ ಮೇಲಿನ ಕ್ರೋಧದಿಂದ ಅದನ್ನು ಹಾದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದರ ಮುಂದೆ ನಿಲ್ಲುವದಕ್ಕೆ ಟಗರಿಗೆ ಏನೂ ಶಕ್ತಿಯಿ ರಲಿಲ್ಲ, ಆದರೆ ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿಯಿತು. ಟಗರನ್ನು ಅದರ ಕೈಯಿಂದ ಬಿಡಿಸುವವನು ಯಾರೂ ಇರಲಿಲ್ಲ.
ERVKN ಹೋತವು ಟಗರಿನ ಕಡೆಗೆ ಓಡುವದನ್ನು ನಾನು ನೋಡುತ್ತಿದ್ದೆ. ಅದು ಅತಿ ಕೋಪದಿಂದ ಟಗರಿನ ಎರಡು ಕೊಂಬುಗಳನ್ನು ಮುರಿದು ಬಿಟ್ಟಿತು. ಟಗರಿಗೆ ಆ ಹೋತವನ್ನು ತಡೆದು ನಿಲ್ಲಿಸಲಾಗಲಿಲ್ಲ. ಆ ಹೋತವು ಟಗರನ್ನು ನೆಲಕ್ಕೆ ಉರುಳಿಸಿ ತುಳಿದುಹಾಕಿತು. ಟಗರನ್ನು ಹೋತದಿಂದ ರಕ್ಷಿಸಲು ಅಲ್ಲಿ ಯಾರೂ ಇರಲಿಲ್ಲ.
IRVKN ನನ್ನ ಕನಸಿನಲ್ಲಿ ಟಗರನ್ನು ಸಮೀಪಿಸಿ, ಅದರ ಮೇಲಣ ಕ್ರೋಧದಿಂದ ಉರಿಯುತ್ತಾ, ಅದರ ಮೇಲೆ ಹಾಯ್ದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದಕ್ಕೆ ಎದುರು ಬೀಳಲು ಟಗರಿಗೆ ಶಕ್ತಿಯಿರಲಿಲ್ಲ. ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿದು ಹಾಕಿತು. ಟಗರನ್ನು ಹೋತದಿಂದ ಬಿಡಿಸುವ ಪ್ರಾಣಿ ಯಾವುದೂ ಇರಲಿಲ್ಲ.