Versions
KNV ಒಂದು ಹಲಗೆಗೆ ಎರಡು ಕೂರುಗಳು ಇರಬೇಕು. ಅವುಗಳನ್ನು ಕ್ರಮವಾಗಿ ಇರಿಸುವಂತೆ ಅವು ಎದುರು ಬದುರಾಗಿ ಇರಬೇಕು. ಹೀಗೆ ಗುಡಾರದ ಎಲ್ಲಾ ಹಲಗೆ ಗಳಿಗೂ ನೀನು ಮಾಡಬೇಕು.
ERVKN ಪ್ರತಿ ಚೌಕಟ್ಟನ್ನು ಮಾಡುವುದಕ್ಕೆ ಎರಡು ಕಡೆಯ ಕೋಲುಗಳನ್ನು ಅಡ್ಡಪಟ್ಟಿಗಳೊಂದಿಗೆ ಒಟ್ಟಾಗಿ ಜೋಡಿಸಬೇಕು. ಪವಿತ್ರಗುಡಾರದ ಎಲ್ಲಾ ಚೌಕಟ್ಟುಗಳು ಒಂದೇ ರೀತಿಯಾಗಿರಬೇಕು.
IRVKN ಪ್ರತಿಯೊಂದು ಚೌಕಟ್ಟು ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವು ಪಟ್ಟಿಗಳುಳ್ಳದ್ದಾಗಿರಬೇಕು. ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆಯೇ ಮಾಡಿಸಬೇಕು.