Versions
KNV ಅದರ ಮೇಲಿರುವ ವಿಚಿತ್ರವಾದ ಎಫೋದಿನ ನಡು ಕಟ್ಟು ಅದೇ ಕೆಲಸಕ್ಕನುಸಾರವಾಗಿ ಚಿನ್ನ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳುಳ್ಳದ್ದಾಗಿದ್ದು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇತ್ತು.
ERVKN ಅವರು ನಡುಕಟ್ಟನ್ನು ಹೆಣೆದು ಏಫೋದಿಗೆ ಬಿಗಿಯಾಗಿ ಕಟ್ಟಿದರು. ಏಫೋದನ್ನು ಮಾಡಿದಂತೆಯೇ ಇದನ್ನು ಮಾಡಲಾಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಇದನ್ನು ಮಾಡುವುದಕ್ಕೆ ಚಿನ್ನದ ದಾರ, ಶ್ರೇಷ್ಠ ನಾರುಬಟ್ಟೆಯನ್ನು ಮತ್ತು ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು.
IRVKN ಕವಚದ ಮೇಲಿರುವ ಕಸೂತಿ ನಡುಕಟ್ಟು ಕವಚಕ್ಕೆ ಏಕವಾಗಿದ್ದು ಅದರಂತೆಯೇ ನಯವಾಗಿ ಹೊಸೆದ ಹತ್ತಿಯ ಬಟ್ಟೆಯಿಂದಲು, ಚಿನ್ನದ ದಾರಗಳಿಂದಲು ಹಾಗೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಮಾಡಲ್ಪಟ್ಟಿತ್ತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು. PEPS