Versions
KNV ಹನೋಕನು ಮರಣವನ್ನು ಅನುಭವಿಸದೆ ಒಯ್ಯ ಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಉಂಟು.
ERVKN ಹನೋಕನು ಸಾವನ್ನು ಅನುಭವಿಸದೆ ಈ ಲೋಕದಿಂದ ಮೇಲೋಕಕ್ಕೆ ಒಯ್ಯಲ್ಪಟ್ಟನು. ಪವಿತ್ರ ಗ್ರಂಥವು ಹೇಳುವಂತೆ, ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರಿಗೆ ನಿಜವಾಗಿಯೂ ಮೆಚ್ಚಿಕೆಯಾಗಿದ್ದನು. ತರುವಾಯ ಜನರಿಗೆ ಅವನು ಸಿಕ್ಕಲೇ ಇಲ್ಲ. ಅವನ ನಂಬಿಕೆಯ ದೆಸೆಯಿಂದ ದೇವರು ಅವನನ್ನು ತನ್ನೊಡನಿರಲು ಕೊಂಡೊಯ್ದನು.
IRVKN ನಂಬಿಕೆಯಿಂದಲೇ ‡ ಆದಿ 5:22-24: ಹನೋಕನು ಮರಣವನ್ನು ಅನುಭವಿಸದೇ ಒಯ್ಯಲ್ಪಟ್ಟನು. ದೇವರು ಅವನನ್ನು ತೆಗೆದುಕೊಂಡು ಹೋದದ್ದರಿಂದ ಅವನು ಯಾರಿಗೂ ಕಾಣಿಸಿಗಲಿಲ್ಲ. ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಹೊಂದಿದನು.