Versions
KNV ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನದಿಯಂತೆ ಸಮಾಧಾನವನ್ನೂ ಹರಿಯುವ ಹಳ್ಳ ದಂತೆ ಜನಾಂಗಗಳ ವೈಭವವನ್ನೂ ಅವಳ ಕಡೆಗೆ ಬರಮಾಡುವೆನು; ಆಗ ನೀವು ಅವುಗಳನ್ನು ಹೀರಿ ಕೊಂಡು ಅವಳ ಪಕ್ಕೆಗಳಲ್ಲಿ ಹೊರಲ್ಪಡುವಿರಿ, ಅವಳ ಮೊಣಕಾಲುಗಳ ಮೇಲೆ ಆಡಿಸಲ್ಪಡುವಿರಿ,
ERVKN ಯೆಹೋವನು ಹೇಳುವದೇನೆಂದರೆ: “ಇಗೋ, ನಾನು ನಿನಗೆ ಸಮಾಧಾನವನ್ನು ಕೊಡುತ್ತೇನೆ. ಒಂದು ದೊಡ್ಡ ಹೊಳೆಯು ಹರಿಯುವಂತೆ ನಿನಗೆ ಸಮಾಧಾನವು ಹರಿದುಕೊಂಡು ಬರುವದು. ಭೂಮಿಯ ಮೇಲಿರುವ ಎಲ್ಲಾ ದೇಶಗಳ ಐಶ್ವರ್ಯವು ನಿನ್ನ ಬಳಿಗೆ ಹರಿದುಬರುವದು. ಅದು ಪ್ರವಾಹದಂತೆ ಹರಿದುಬರುವದು. ನೀವು ಸಣ್ಣ ಮಕ್ಕಳಂತೆ ಆ ಹಾಲನ್ನು ಕುಡಿಯುವಿರಿ. ನಾನು ನಿಮ್ಮನ್ನೆತ್ತಿ ಕೈಗಳಲ್ಲಿ ಅಪ್ಪಿಕೊಳ್ಳುವೆನು. ನನ್ನ ತೊಡೆಯ ಮೇಲೆ ನಿಮ್ಮನ್ನು ಕುಳ್ಳಿರಿಸಿ ಆಟವಾಡಿಸುವೆನು.
IRVKN ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ,
ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು;
ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.