Versions
KNV ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
ERVKN ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದುದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.
IRVKN ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.” PEPS