Bible Versions
Bible Books

Leviticus 23:18 (LITV) Literal Translation of the Holy Bible

Versions

KNV   ಇದಲ್ಲದೆ ನೀವು ರೊಟ್ಟಿಯೊಂದಿಗೆ ದೋಷವಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದು ಎಳೇ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸ ಬೇಕು; ಅವು ಕರ್ತನಿಗೆ ದಹನಬಲಿಯಾಗಿರುವವು. ಅವುಗಳೊಂದಿಗೆ ಆಹಾರ ಬಲಿಯು ಪಾನಾರ್ಪಣೆಗಳು ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು.
ERVKN   “ಜನರು ಸಮರ್ಪಿಸುವ ರೊಟ್ಟಿ, ಧಾನ್ಯ ಮತ್ತು ದ್ರಾಕ್ಷಾರಸಗಳೊಂದಿಗೆ ಒಂದು ಹೋರಿ, ಎರಡು ಟಗರು ಮತ್ತು ಒಂದು ವರ್ಷದ ಏಳು ಕುರಿಮರಿಗಳನ್ನು ಅರ್ಪಿಸಲಾಗುವುದು. ಪಶುಗಳಲ್ಲಿ ಯಾವ ದೋಷವು ಇರಬಾರದು. ಅವುಗಳು ಯೆಹೋವನಿಗೆ ಅಗ್ನಿಯ ಮೂಲಕ ಅರ್ಪಿತವಾಗಲಿರುವ ಸಮರ್ಪಣೆಗಳಾಗಿವೆ. ಅದರ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಗಿದೆ.
IRVKN   ರೊಟ್ಟಿಗಳೊಡನೆ ಒಂದು ವರ್ಷದ ಪೂರ್ಣಾಂಗವಾದ ಏಳು ಕುರಿಗಳನ್ನು, ಒಂದು ಹೋರಿಯನ್ನು ಮತ್ತು ಎರಡು ಟಗರುಗಳನ್ನು ಸಮರ್ಪಿಸಬೇಕು. ಇವು ಧಾನ್ಯದ್ರವ್ಯದೊಡನೆ ಮತ್ತು ಪಾನದ್ರವ್ಯದೊಡನೆ ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us