Versions
KNV ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ERVKN ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು. ಆದರೆ ನಿನಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೋಡಗಳ ಮೇಲೆ ಕುಳಿತು ಬರುವುದನ್ನೂ ನೀವು ಕಾಣುವಿರಿ” ಎಂದು ಹೇಳಿದನು.
IRVKN ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ * ಮತ್ತಾ 16:7; ಕೀರ್ತ 110:1 ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು.