Versions
KNV ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು.
ERVKN ಮೃಗದ ತಲೆಗಳಲ್ಲಿ ಒಂದು ತಲೆಯು ಗಾಯಗೊಂಡು ಸತ್ತಂತೆ ಕಾಣುತ್ತಿತ್ತು. ಆದರೆ ಮರಣಕರವಾದ ಈ ಗಾಯವನ್ನು ವಾಸಿಮಾಡಲಾಯಿತು. ಈ ಲೋಕದಲ್ಲಿದ್ದ ಜನರೆಲ್ಲರೂ ಆಶ್ಚರ್ಯಗೊಂಡು ಆ ಮೃಗವನ್ನು ಹಿಂಬಾಲಿಸಿದರು.
IRVKN ಅದರ ತಲೆಗಳಲ್ಲಿ ಒಂದು ತಲೆ ಗಾಯಹೊಂದಿ ಸಾಯುವ ಹಾಗಿರುವುದನ್ನು ಕಂಡೆನು. ಆ ಮರಣಕರವಾದ ಗಾಯವು ವಾಸಿಯಾಯಿತು, † ಪ್ರಕ 17:8: ಭೂಲೋಕದವರೆಲ್ಲರು ಆ ಮೃಗವನ್ನು ನೋಡುತ್ತಾ ಆಶ್ಚರ್ಯಪಟ್ಟರು.