Versions
KNV ಆಗ ಅಡಿಗೆಯವನು ಒಂದು ಮುಂದೊಡೆಯನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಅದನ್ನು ಸೌಲನ ಮುಂದೆ ಇಟ್ಟನು. ಆಗ ಸಮುವೇಲನು ಸೌಲನಿಗೆ--ಇಗೋ, ಇದು ನಿನ ಗೋಸ್ಕರ ಪ್ರತ್ಯೇಕಿಸಿದ್ದು ತೆಗೆದುಕೊಂಡು ತಿನ್ನು. ಯಾಕಂದರೆ ನಾನು ಜನರನ್ನು ಕರೆದಿದ್ದೇನೆಂದು ಹೇಳಿದ ಕಾಲದಿಂದ ಈ ವರೆಗೂ ನಿನಗೋಸ್ಕರ ಇಡಲ್ಪಟ್ಟಿತ್ತು ಅಂದನು. ಹಾಗೆಯೇ ಸೌಲನು ಆ ದಿವಸದಲ್ಲಿ ಸಮುವೇಲನ ಸಂಗಡ ಊಟಮಾಡಿದನು.
ERVKN ಅಡಿಗೆಯವನು ತೊಡೆಯ ಮಾಂಸವನ್ನು ತೆಗೆದುಕೊಂಡು ಬಂದು ಸೌಲನ ಎದುರಿಗೆ ಮೇಜಿನ ಮೇಲಿಟ್ಟನು. ಸಮುವೇಲನು, “ನಾನು ನಿನಗಾಗಿ ಈ ಮಾಂಸವನ್ನು ಪ್ರತ್ಯೇಕವಾಗಿರಿಸಿದ್ದೇನೆ. ಇದನ್ನು ತಿನ್ನು, ಏಕೆಂದರೆ ಇದನ್ನು ಈ ವಿಶೇಷವಾದ ಸಂದರ್ಭದಲ್ಲಿ ನಿನಗೆ ಕೊಡುವುದಕ್ಕಾಗಿಯೇ ಪ್ರತ್ಯೇಕಿಸಲಾಗಿತ್ತು” ಎಂದು ಹೇಳಿದನು. ಆದ್ದರಿಂದ ಸೌಲನು ಸಮುವೇಲನ ಜೊತೆಯಲ್ಲಿ ಆ ದಿನ ಊಟಮಾಡಿದನು.
IRVKN ಅವನು ‡ ಯಾಜ 7:32-33. ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟನು. ಆಗ ಸಮುವೇಲನು, “ಇಗೋ, ಇದು ನಿನಗೋಸ್ಕರ ಪ್ರತ್ಯೇಕಿಸಿದ್ದು; ಇದನ್ನು ತಿನ್ನು, ಯಾಕೆಂದರೆ ಜನರನ್ನು ಭೋಜನಕ್ಕೆ ಕರೆದಾಗಿನಿಂದ ಇದು ನಿನಗೋಸ್ಕರವಾಗಿಯೇ ಇಡಲ್ಪಟ್ಟಿತ್ತು” ಎಂದು ಸೌಲನಿಗೆ ಹೇಳಿದನು. ಸೌಲನು ಆ ದಿನ ಸಮುವೇಲನ ಸಂಗಡ ಊಟಮಾಡಿದನು.