Versions
KNV ಇಸ್ರಾಯೇಲ್ ಮಕ್ಕಳು ಅವರಿಗೆ--ನಾವು ಐಗುಪ್ತದೇಶದಲ್ಲಿ ಮಾಂಸದ ಪಾತ್ರೆ ಗಳ ಬಳಿಯಲ್ಲಿ ಕೂತುಕೊಂಡು ಸಾಕಾಗುವಷ್ಟು ರೊಟ್ಟಿ ಯನ್ನು ತಿನ್ನುತ್ತಿದ್ದಾಗ ಕರ್ತನ ಕೈಯಿಂದ ಸತ್ತುಹೋಗಿದ್ದರೆ ಒಳ್ಳೆದಾಗಿತ್ತು. ಈ ಸಭೆಯನ್ನೆಲ್ಲಾ ಸಾಯಿಸುವಂತೆ ನಮ್ಮನ್ನು ಈ ಅರಣ್ಯಕ್ಕೆ ಬರಮಾಡಿದ್ದೀರಿ ಅಂದರು.
ERVKN ಅವರು, “ಯೆಹೋವನು ನಮ್ಮನ್ನು ಈಜಿಪ್ಟಿನಲ್ಲಿ ಕೊಂದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ನಮಗೆ ಈಜಿಪ್ಟಿನಲ್ಲಿ ಮಾಂಸವೂ ರೊಟ್ಟಿಯೂ ಇತ್ತು. ನಮಗೆ ಬೇಕಿದ್ದ ಆಹಾರವೆಲ್ಲಾ ನಮ್ಮಲ್ಲಿತ್ತು. ಆದರೆ ಈಗ ನೀವು ನಮ್ಮನ್ನು ಈ ಅರಣ್ಯಕ್ಕೆ ಕರೆದುಕೊಂಡು ಬಂದಿರಿ. ನಾವೆಲ್ಲರೂ ಇಲ್ಲಿ ಹಸಿವೆಯಿಂದ ಸಾಯುವೆವು” ಎಂದು ಹೇಳಿದರು.
IRVKN ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, “ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು” ಎಂದರು.