Versions
KNV ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು; ಮನುಷ್ಯರ ರಕ್ತಕ್ಕಾಗಿ ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಬಲಾತ್ಕಾರದ ನಿಮಿತ್ತವೇ.
ERVKN ಎಷ್ಟೋ ಜನಾಂಗಗಳಿಂದ ನೀನು ವಸ್ತುಗಳನ್ನು ಅಪಹರಿಸಿದ್ದೀ. ಅವರು ನಿನ್ನಿಂದ ಇನ್ನೂ ಹೆಚ್ಚಾಗಿ ಅಪಹರಿಸುವರು. ನೀನು ಎಷ್ಟೋ ಮಂದಿಯನ್ನು ಕೊಂದಿರುತ್ತೀ; ದೇಶಗಳನ್ನೂ ನಗರಗಳನ್ನೂ ನಾಶ ಮಾಡಿರುತ್ತೀ. ಅಲ್ಲಿಯ ಎಷ್ಟೋ ಜನರನ್ನು ಸಂಹರಿಸಿರುತ್ತೀ.
IRVKN ನೀನು ಬಹು ಜನರನ್ನು ಕೊಳ್ಳೆಹೊಡೆದು, ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ,
ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಈ ಕಾರಣದಿಂದ, ಜನಾಂಗಗಳಲ್ಲಿ ಉಳಿದವರೆಲ್ಲರೂ ನಿನ್ನನ್ನು ಕೊಳ್ಳೆ ಹೊಡೆಯುವರು.