Versions
KNV ಅವರು ತಮಗೆ ನಾಚಿಕೆ ಯಾಗುವ ಮಟ್ಟಿಗೂ ಕಾದಿದ್ದರು. ಆದರೆ ಇಗೋ, ಅವನು ಕೊಠಡಿಯ ಬಾಗಿಲನ್ನು ತೆರೆಯದೆ ಇದ್ದದರಿಂದ ಅವರು ಬೀಗದ ಕೈಯನ್ನು ತೆಗೆದುಕೊಂಡು ಬಾಗಲನ್ನು ತೆರೆದರು, ಇಗೋ, ಅವರ ಪ್ರಭುವು ನೆಲದ ಮೇಲೆ ಸತ್ತು ಬಿದ್ದಿದ್ದನು.
ERVKN ಹೀಗಾಗಿ ಸೇವಕರು ಬಹಳ ಹೊತ್ತಿನವರೆಗೆ ಅರಸನಿಗಾಗಿ ಕಾಯುತ್ತಾ ಚಿಂತೆಗೊಳಗಾದರು. ಅವರು ಬೀಗದ ಕೈಯನ್ನು ತಂದು ಬಾಗಿಲುಗಳನ್ನು ತೆರೆದರು. ಸೇವಕರು ಒಳಗೆ ಹೋದಾಗ ತಮ್ಮ ಅರಸನು ನೆಲದ ಮೇಲೆ ಸತ್ತು ಬಿದ್ದಿರುವುದನ್ನು ಕಂಡರು.
IRVKN ತಮಗೆ ಬೇಸರವಾಗುವ ತನಕ ಕಾಯುತ್ತಾ ಇದ್ದರು. ಆದರೂ ಕದಗಳು ತೆರೆಯಲ್ಪಡದೆ ಇರುವುದನ್ನು ನೋಡಿ ಬೀಗದ ಕೈಯನ್ನು ತೆಗೆದುಕೊಂಡು ಬಾಗಿಲನ್ನು ತೆರೆಯಲು, ಇಗೋ, ಅವರ ಒಡೆಯನು ಸತ್ತುಬಿದ್ದಿದ್ದನು.