Versions
KNV ಆಗ ಕರ್ತನ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆ ಯಿಂದ ಎದ್ದು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿ ಗಳನ್ನೂ ದಹಿಸಿಬಿಟ್ಟಿತು. ಆಗ ಕರ್ತನ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು.
ERVKN ಯೆಹೋವನ ದೂತನ ಕೈಯಲ್ಲಿ ಒಂದು ಕೋಲಿತ್ತು. ಯೆಹೋವನ ದೂತನು ತನ್ನ ಕೋಲಿನ ತುದಿಯಿಂದ ಮಾಂಸವನ್ನು ಮತ್ತು ರೊಟ್ಟಿಯನ್ನು ಮುಟ್ಟಿದನು. ಆಗ ಆ ಕಲ್ಲಿನಿಂದ ಬೆಂಕಿಯ ಜ್ವಾಲೆಯು ಎದ್ದಿತು! ಮಾಂಸ ಮತ್ತು ರೊಟ್ಟಿ ಸಂಪೂರ್ಣವಾಗಿ ಸುಟ್ಟುಹೋದವು! ಆಮೇಲೆ ಯೆಹೋವನ ದೂತನು ಅದೃಶ್ಯನಾದನು.
IRVKN ಅನಂತರ ಯೆಹೋವನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ, ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು; ಯೆಹೋವನ ದೂತನು ಅದೃಶ್ಯನಾದನು.