Versions
KNV ಆದದರಿಂದ ದಾವೀದನು ಯೋವಾಬನ ಸಂಗಡಲೂ ಜನರ ಪ್ರಧಾನರ ಸಂಗಡಲೂ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀವು ಹೋಗಿ ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೆ ಇಸ್ರಾಯೇಲ್ಯರನ್ನು ಲೆಕ್ಕಿಸಿ ಅವರ ಲೆಕ್ಕವನ್ನು ನನಗೆ ತಕ್ಕೊಂಡು ಬನ್ನಿರಿ ಅಂದನು.
ERVKN ದಾವೀದನು ಯೋವಾಬನನ್ನೂ ಇಸ್ರೇಲರ ಇತರ ಅಧಿಪತಿಗಳನ್ನೂ ಕರೆದು ಅವರಿಗೆ, “ದೇಶದೊಳಕ್ಕೆ ಹೋಗಿ ಇಸ್ರೇಲರೆಲ್ಲರನ್ನು ಲೆಕ್ಕಿಸಿರಿ. ಬೇರ್ಷೆಬದಿಂದ ಹಿಡಿದು ದಾನ್ ಪಟ್ಟಣ ತನಕ ಎಲ್ಲಾ ಊರುಗಳನ್ನು ಸಂಚರಿಸಿ ಜನರನ್ನು ಲೆಕ್ಕಿಸಿರಿ. ಆಗ ನನಗೆ ನನ್ನ ರಾಜ್ಯದ ಜನಸಂಖ್ಯೆಯು ತಿಳಿಯುವದು” ಅಂದನು.
IRVKN ದಾವೀದನು ಯೋವಾಬನನ್ನೂ ಮತ್ತು ಜನಾಧಿಪತಿಗಳನ್ನೂ ಕರೆದು, “ನನಗೆ ಜನರ ಲೆಕ್ಕ ಗೊತ್ತಾಗುವ ಹಾಗೆ ನೀವು ಬೇರ್ಷೆಬದಿಂದ ದಾನ್ ಊರಿನವರೆಗೂ ಸಂಚರಿಸಿ, ಇಸ್ರಾಯೇಲರನ್ನು ಲೆಕ್ಕ ಮಾಡಿಕೊಂಡು ಬನ್ನಿರಿ” ಎಂದು ಆಜ್ಞಾಪಿಸಿದನು.