Versions
KNV ಜಿಮ್ರಿಯು ಒಳಸಂಚು ಮಾಡಿ ಅರಸನನ್ನು ಕೊಂದು ಹಾಕಿದ್ದಾನೆಂದು ಅಲ್ಲಿ ಇಳಿದಿರುವ ದಂಡಿನವರು ಕೇಳಿ ದ್ದರಿಂದ ಇಸ್ರಾಯೇಲ್ಯರೆಲ್ಲರೂ ಅದೇ ದಿವಸದಲ್ಲಿ ದಂಡಿನೊಳಗೆ ದಂಡಿನ ಅಧಿಪತಿಯಾದ ಒಮ್ರಿಯನ್ನು ಇಸ್ರಾಯೇಲಿನ ಮೇಲೆ ಅರಸನಾಗ ಮಾಡಿದರು.
ERVKN ರಾಜನ ವಿರುದ್ಧ ಜಿಮ್ರಿಯು ರಹಸ್ಯ ಯೋಜನೆಗಳನ್ನು ಮಾಡಿದ್ದಾನೆಂಬುದು ಪಾಳೆಯದಲ್ಲಿದ್ದ ಜನರಿಗೆ ತಿಳಿಯಿತು. ಅವನು ರಾಜನನ್ನು ಕೊಂದುಹಾಕಿದನೆಂಬುದು ಅವರಿಗೆ ತಿಳಿಯಿತು. ಆದುದರಿಂದ ಇಸ್ರೇಲರೆಲ್ಲರೂ ಆ ದಿನವೇ ಪಾಳೆಯದಲ್ಲಿ ಒಮ್ರಿಯನ್ನು ಇಸ್ರೇಲಿನ ರಾಜನನ್ನಾಗಿ ಮಾಡಿದರು. ಒಮ್ರಿಯು ಸೈನ್ಯದ ಅಧಿಪತಿಯಾಗಿದ್ದನು.
IRVKN ಜಿಮ್ರಿಯು ಅರಸನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಕೊಂದುಹಾಕಿದನೆಂಬ ವರ್ತಮಾನವು ಪಾಳೆಯದಲ್ಲಿದ್ದ ಇಸ್ರಾಯೇಲರಿಗೆ ಮುಟ್ಟಿತು. ಅವರು ಅದೇ ದಿನ ಅಲ್ಲಿಯೇ ಸೈನ್ಯಾಧಿಪತಿಯಾದ ಒಮ್ರಿಯನ್ನು ತಮ್ಮ ಅರಸನನ್ನಾಗಿ ನೇಮಿಸಿಕೊಂಡರು.