Versions
KNV ನಾವು ಹೋಗೋಣ ಅಂದನು. ದಾವೀದನು ಸೌಲನ ತಲೆ ದಿಂಬಿನ ಬಳಿಯಲ್ಲಿದ್ದ ಈಟಿಯನ್ನೂ ನೀರಿನ ತಂಬಿಗೆ ಯನ್ನೂ ತೆಗೆದುಕೊಂಡ ಮೇಲೆ ಅವರು ಹೊರಟು ಹೋದರು. ಒಬ್ಬರಾದರೂ ನೋಡಿದ್ದಿಲ್ಲ; ಅರಿತಿದ್ದಿಲ್ಲ; ಯಾರೂ ಎಚ್ಚತ್ತಿರಲಿಲ್ಲ. ಯಾಕಂದರೆ ಕರ್ತನಿಂದ ಅಗಾಧ ನಿದ್ರೆಯು ಅವರ ಮೇಲೆ ಇಳಿದ ಕಾರಣ ಅವರೆಲ್ಲರೂ ನಿದ್ರೆ ಮಾಡುತ್ತಿದ್ದರು.
ERVKN ಅಂತೆಯೇ, ಸೌಲನ ತಲೆಯ ಹತ್ತಿರವಿದ್ದ ಭರ್ಜಿಯನ್ನೂ ನೀರಿನ ತಂಬಿಗೆಯನ್ನೂ ದಾವೀದನು ತೆಗೆದುಕೊಂಡನು. ನಂತರ ದಾವೀದ ಮತ್ತು ಅಬೀಷೈ ಸೌಲನ ಪಾಳೆಯನ್ನು ಬಿಟ್ಟು ಹೋದರು. ಇದನ್ನು ಯಾರೂ ನೋಡಲಿಲ್ಲ. ಇದರ ಬಗ್ಗೆ ಯಾರಿಗೂ ತಿಳಿಯಲಿಲ್ಲ. ಒಬ್ಬನಾದರೂ ನಿದ್ರೆಯಿಂದ ಎಚ್ಚರಗೊಳ್ಳಲಿಲ್ಲ! ಸೌಲನು ಮತ್ತು ಅವನ ಸೈನಿಕರೆಲ್ಲರೂ ನಿದ್ರಿಸುತ್ತಿದ್ದರು. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು.
IRVKN ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಬರ್ಜಿ ಮತ್ತು ನೀರಿನ ತಂಬಿಗೆಯನ್ನು ತೆಗೆದುಕೊಂಡು ಹೋದರು. ಯಾರೂ ನೋಡಲಿಲ್ಲ, ಯಾರಿಗೂ ಗೊತ್ತಾಗಲಿಲ್ಲ, ಯಾರೂ ಎಚ್ಚರವಾಗಲಿಲ್ಲ. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು. ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರೂ ನಿದ್ರೆಮಾಡುತ್ತಿದ್ದರು. PEPS