Versions
KNV ಆಗ ಸೌಲನುನಾನು ಪಾಪಮಾಡಿದೆನು; ನನ್ನ ಮಗನಾದ ದಾವೀ ದನೇ, ತಿರಿಗಿ ಬಾ; ಯಾಕಂದರೆ ನನ್ನ ಜೀವವು ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡುಮಾಡೆನು; ಇಗೋ, ನಾನು ಹುಚ್ಚು ಕೆಲಸಮಾಡಿದ್ದೇನೆ. ಮಹಾ ಹೆಚ್ಚಾದ ತಪ್ಪು ಮಾಡಿದೆನು ಅಂದನು.
ERVKN ನಂತರ ಸೌಲನು, “ನಾನು ಪಾಪಮಾಡಿದ್ದೇನೆ. ನನ್ನ ಮಗನಾದ ದಾವೀದನೇ, ಹಿಂದಿರುಗಿ ಬಾ. ನನ್ನ ಜೀವವು ನಿನಗೆ ಮುಖ್ಯವೆಂಬುದನ್ನು ನನಗೆ ನೀನು ಈ ದಿನ ತೋರಿಸಿರುವೆ. ಆದುದರಿಂದ ನಾನು ನಿನ್ನನ್ನು ಹಿಂಸಿಸಲು ಪ್ರಯತ್ನಿಸುವುದಿಲ್ಲ. ನಾನು ಮೂರ್ಖನಂತೆ ವರ್ತಿಸಿದೆ. ನಾನು ದೊಡ್ಡ ತಪ್ಪನ್ನು ಮಾಡಿದ್ದೇನೆ” ಎಂದನು.
IRVKN ಆಗ ಸೌಲನು ಅವನಿಗೆ, “ನಾನು ಪಾಪಮಾಡಿದೆನು, ದಾವೀದನೇ ನನ್ನ ಮಗನೇ ಹಿಂದಿರುಗಿ ಬಾ. ಈ ಹೊತ್ತು ನನ್ನ ಜೀವವು ನಿನ್ನ ದೃಷ್ಟಿಯಲ್ಲಿ ಬಹು ಬೆಲೆಯುಳ್ಳದೆಂದು ಎಣಿಸಲ್ಪಟ್ಟಿತು. ಆದ್ದರಿಂದ ನಾನು ಇನ್ನು ಮುಂದೆ ನಿನಗೆ ಕೇಡುಮಾಡುವುದಿಲ್ಲ. ಈ ವರೆಗೆ ನಾನು ಮಾಡಿದ್ದು ಹುಚ್ಚುತನವೂ ದೊಡ್ಡ ತಪ್ಪೂ ಆಗಿದೆ” ಎಂದು ಹೇಳಿದನು