Versions
KNV ಅದಕ್ಕೆ ವರ್ತಮಾನ ತಂದವನು ಪ್ರತ್ಯುತ್ತರವಾಗಿ--ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರ ವಾಯಿತು; ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಸತ್ತರು; ಇದಲ್ಲದೆ ದೇವರ ಮಂಜೂ ಷವು ಶತ್ರುವಶವಾಯಿತು ಅಂದನು.
ERVKN ಆ ಬೆನ್ಯಾಮೀನ್ಯನು, “ಇಸ್ರೇಲರು ಫಿಲಿಷ್ಟಿಯರಿಂದ ಸೋತು, ಹಿಮ್ಮೆಟ್ಟಿದರು. ಇಸ್ರೇಲರ ಪಡೆಯು ಅನೇಕ ಸೈನಿಕರನ್ನು ಕಳೆದುಕೊಂಡಿತು. ನಿನ್ನ ಮಕ್ಕಳಿಬ್ಬರೂ ಸತ್ತರು. ಫಿಲಿಷ್ಟಿಯರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋದರು” ಎಂದು ಹೇಳಿದನು.
IRVKN ಅವನು ಏಲಿಗೆ, “ಇಸ್ರಾಯೇಲರು ಫಿಲಿಷ್ಟಿಯರಿಗೆ ಬೆನ್ನುತೋರಿಸಿದರು; ಮಹಾಸಂಹಾರವಾಯಿತು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸರು ಸತ್ತರು; ದೇವರ ಮಂಜೂಷವು ಶತ್ರುವಶವಾಯಿತು” ಎಂದು ತಿಳಿಸಿದನು.