Versions
KNV ಆಗ ಆ ಪಟ್ಟಣದಲ್ಲೆಲ್ಲಾ ಮರಣಕರವಾದ ನಾಶನ ಉಂಟಾಗಿ ದೇವರ ಕೈ ಅಲ್ಲಿ ಮಹಾಭಾರವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟು ಗೂಡಿಸಿ ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ ನಮ್ಮ ಜನರನ್ನೂ ಕೊಂದುಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರಿಗಿ ಹೋಗುವಂತೆ ಕಳುಹಿಸಿಬಿಡಿರಿ ಅಂದರು.
ERVKN ಎಕ್ರೋನಿನ ಜನರು ಫಿಲಿಷ್ಟಿಯರ ಅಧಿಪತಿಗಳನ್ನೆಲ್ಲಾ ಒಟ್ಟಿಗೆ ಸೇರಿಸಿ, “ಇಸ್ರೇಲರ ದೇವರ ಪವಿತ್ರಪೆಟ್ಟಿಗೆಯು ನಮ್ಮನ್ನೂ ನಮ್ಮ ಜನರನ್ನೂ ಕೊಲ್ಲುವುದಕ್ಕೆ ಮೊದಲೇ ಅದನ್ನು ಅದರ ಸ್ವಸ್ಥಳಕ್ಕೆ ಕಳುಹಿಸಿ” ಎಂದು ಹೇಳಿದರು. ಎಕ್ರೋನಿನ ಜನರು ಬಹಳ ಹೆದರಿಕೊಂಡಿದ್ದರು. ದೇವರು ಅಲ್ಲಿಯ ಜನರ ಜೀವನವನ್ನು ಬಹು ಕಠಿಣಗೊಳಿಸಿದ್ದನು.
IRVKN ದೇವರ ಹಸ್ತವು ಅವರಿಗೂ ಬಾಧಕವಾಗಿದ್ದುದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ, “ಇಸ್ರಾಯೇಲಿನ ದೇವರ ಮಂಜೂಷವನ್ನು ಹಾಗೆಯೇ ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ” ಅಂದರು.