Versions
KNV ಅದೇ ದಿವಸದಲ್ಲಿ ಯೆಹೂದ್ಯರು ಅರಸನಾದ ಅಹ ಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿರುವ ತಮ್ಮ ತಮ್ಮ ಪಟ್ಟಣಗಳಲ್ಲಿ ತಮ್ಮನ್ನು ಕೊಲ್ಲಲು ಹುಡುಕುವವರ ಮೇಲೆ ಕೈ ಹಾಕಲು ಕೂಡಿಕೊಂಡರು. ಆಗ ಅವರ ಭಯವು ಸಮಸ್ತ ಜನರ ಮೇಲೆ ಬಿದ್ದದ್ದರಿಂದ ಅವರ ಮುಂದೆ ನಿಲ್ಲುವವನು ಒಬ್ಬನೂ ಇರಲಿಲ್ಲ.
ERVKN ರಾಜನಾದ ಅಹಷ್ವೇರೋಷನ ಸಾಮ್ರಾಜ್ಯದ ಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಮ್ಮನ್ನು ಕೊಲ್ಲಲು ಬರುವ ವೈರಿಗಳನ್ನು ಎದುರಿಸಲು ಒಟ್ಟಾಗಿ ಸೇರಿದರು. ಇವರಿಗೆ ವಿರುದ್ಧವಾಗಿ ಬಿದ್ದು ಹೊಡೆದಾಡಲು ಯಾರಿಗೂ ಧೈರ್ಯಸಾಲಲಿಲ್ಲ. ಯೆಹೂದ್ಯರ ಮೇಲೆ ಜನರಿಗೆ ಭೀತಿ ಉಂಟಾಯಿತು.
IRVKN ಆದುದರಿಂದ ಅರಸನಾದ ಅಹಷ್ವೇರೋಷನ ಸಮಸ್ತ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿದ್ದ ಯೆಹೂದ್ಯರು ತಮಗೆ ಕೇಡು ಬಯಸಿದವರಿಗೆ ವಿರುದ್ಧವಾಗಿ ಕೈಯೆತ್ತುವುದಕ್ಕೆ ಸೇರಿಕೊಂಡಾಗ ಯಾರಿಗೂ ಅವರ ಎದುರಿನಲ್ಲಿ ನಿಲ್ಲಲಾಗಲಿಲ್ಲ.