Versions
KNV ಏನಂದರೆ, ಆ ದಿವಸಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಂದ ತಪ್ಪಿಸಿಕೊಂಡು ವಿಶ್ರಾಂತಿ ಹೊಂದಿದರು. ಆ ತಿಂಗಳು ದುಃಖದಿಂದ ಸಂತೋಷಕ್ಕೂ ಗೋಳಾಡುವಿಕೆಯಿಂದ ಸುದಿನಕ್ಕೂ ಅವರಿಗೆ ಬದಲಾಯಿತು. ಆದದರಿಂದ ಅವರು ಆ ದಿವಸಗಳನ್ನು ಹಬ್ಬದ ದಿವಸಗಳಾಗಿಯೂ ಸಂತೋಷದ ದಿವಸಗಳಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸಗಳಾಗಿಯೂ ಬಡವ ರಿಗೆ ದಾನಗಳನ್ನು ಕೊಡುವ ದಿವಸಗಳಾಗಿಯೂ ಮಾಡಬೇಕು ಎಂಬದು.
ERVKN ಯಾಕೆಂದರೆ ಆ ದಿವಸದಲ್ಲಿ ಯೆಹೂದ್ಯರು ತಮ್ಮ ಶತ್ರುಗಳನ್ನು ಸದೆ ಬಡಿದರು. ಆ ದಿವಸದಲ್ಲಿ ಅವರಿಗೆ ಶೋಕದ ಬದಲಾಗಿ ಸಂತಸವು ಒದಗಿಬಂತು. ಮತ್ತು ಆ ದಿವಸದಲ್ಲಿ ಅವರ ರೋಧನವು ಹರ್ಷಧ್ವನಿಯಾಗಿ ಮಾರ್ಪಟ್ಟಿತು. ಮೊರ್ದೆಕೈಯು ಎಲ್ಲಾ ಯೆಹೂದ್ಯರಿಗೆ ಪತ್ರ ಬರೆಯಿಸಿದನು. ಆ ದಿವಸದಲ್ಲಿ ಹಬ್ಬವನ್ನು ಆಚರಿಸಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಡಬೇಕು ಎಂಬುದಾಗಿ ಬರೆಯಿಸಿದನು.
IRVKN ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿ ಉಂಟಾಯಿತು. ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂದಿತು. ಆದುದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡು ಬಡವರಿಗೆ ದಾನಧರ್ಮ ಮಾಡಬೇಕು.