Versions
KNV ನೀನು ನನ್ನ ಜನರನ್ನು ಕಳುಹಿಸದೆ ಹೋದರೆ ಇಗೋ, ನಾನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಮನೆಗಳಲ್ಲಿಯೂ ನೊಣಗಳನ್ನು ಕಳುಹಿಸುವೆನು. ಐಗುಪ್ತ್ಯರ ಮನೆಗಳೂ ಅವರು ವಾಸವಾಗಿರುವ ಭೂಮಿಯೂ ನೊಣಗಳಿಂದ ತುಂಬಿರುವವು.
ERVKN ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ, ಹುಳಗಳು ನಿನ್ನ ಮೇಲೆಯೂ ನಿನ್ನ ಅಧಿಕಾರಿಗಳ ಮೇಲೆಯೂ ನಿನ್ನ ಜನರ ಮೇಲೆಯೂ ನಿಮ್ಮ ಮನೆಗಳಲ್ಲಿಯೂ ತುಂಬಿಕೊಳ್ಳುವವು; ನೆಲದ ಮೇಲೆಲ್ಲಾ ಇರುವವು.
IRVKN ಆದರೆ ನೀನು, ನನ್ನ ಜನರಿಗೆ ಅಪ್ಪಣೆಕೊಡದೇ ಹೋದರೆ, ನಾನು ನಿನಗೂ, ನಿನ್ನ ಪರಿವಾರದವರಿಗೂ, ನಿನ್ನ ಮನೆಗಳಿಗೂ ನೊಣಗಳ ಕಾಟವುಂಟಾಗುವಂತೆ ಮಾಡುವೆನು. ಐಗುಪ್ತ್ಯರ ಮನೆಗಳಲ್ಲಿಯೂ, ಅವರ ಎಲ್ಲಾ ಭೂಮಿಗಳಲ್ಲಿಯೂ ಆ ನೊಣಗಳು ತುಂಬಿಕೊಳ್ಳುವವು.