Versions
KNV ಅದಕ್ಕೆ ಏರುವ ಹಾಗೆ ಏಳು ಮೆಟ್ಟಲುಗಳು ಇದ್ದವು. ಅದರ ಕೈಸಾಲೆಗಳು ಅದರ ಮುಂದೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಒಂದೊಂದು ಖರ್ಜೂರದ ಮರವಿತ್ತು.
ERVKN ಅದರ ಮೇಲೆ ಏರಲು ಏಳು ಮೆಟ್ಟಲುಗಳಿದ್ದವು. ಅದರ ಕೈಸಾಲೆಯು ದಾಬರದ ಒಳಗಿನ ಭಾಗದಲ್ಲಿತ್ತು. ಅದರ ಅಕ್ಕಪಕ್ಕದ ಗೋಡೆಗಳಲ್ಲಿ ಖರ್ಜೂರ ವೃಕ್ಷದ ಕೆತ್ತನೆ ಕೆಲಸವಿತ್ತು.
IRVKN ಅಲ್ಲಿ ಹತ್ತುವುದಕ್ಕೆ ಏಳು ಮೆಟ್ಟಿಲುಗಳಿದ್ದವು. ಕೈಸಾಲೆಯ ಎರಡು ಪಕ್ಕದ ಕಂಬಗಳಲ್ಲಿ ಖರ್ಜೂರ ಮರಗಳ ಚಿತ್ರಗಳಿದ್ದವು.