Bible Versions
Bible Books

Genesis 24:15 (LXXRP) Septugine Greek Old Testament with Grammar and Strong Code

Versions

KNV   ಅವನು ಹಾಗೆ ಹೇಳುವದನ್ನು ಮುಗಿಸುವದಕ್ಕಿಂತ ಮುಂಚೆ ಆದದ್ದೇನಂದರೆ, ಇಗೋ, ಅಬ್ರಹಾಮನ ಸಹೋದರ ನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ತನ್ನ ಕೊಡವನ್ನು ಹೆಗಲಿನ ಮೇಲಿಟ್ಟುಕೊಂಡು ಹೊರಗೆ ಬಂದಳು.
ERVKN   ಸೇವಕನು ಪ್ರಾರ್ಥನೆ ಮಾಡಿ ಮುಗಿಸುವುದಕ್ಕಿಂತ ಮೊದಲೇ ರೆಬೆಕ್ಕ ಎಂಬ ಯುವತಿಯು ಬಾವಿಯ ಬಳಿಗೆ ಬಂದಳು. ರೆಬೆಕ್ಕಳು ಬೆತೂವೇಲನ ಮಗಳು. ಬೆತೂವೇಲನು ಮಿಲ್ಕಳ ಮತ್ತು ನಾಹೋರನ ಮಗನು. ನಾಹೋರನು ಅಬ್ರಹಾಮನ ತಮ್ಮ. ರೆಬೆಕ್ಕಳು ತನ್ನ ಹೆಗಲ ಮೇಲೆ ನೀರಿನ ಕೊಡವನ್ನು ತೆಗೆದುಕೊಂಡು ಬಾವಿಗೆ ಬಂದಳು.
IRVKN   ಅವನು ಹೀಗೆ ಅಂದುಕೊಳ್ಳುತ್ತಿರುವಾಗಲೇ ಅಬ್ರಹಾಮನ ತಮ್ಮನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us