Versions
KNV ನಾನು ನಿಮ್ಮನ್ನು ಸಸ್ಯ ನಾಶದಿಂದಲೂ ಬಿರುಗಾಳಿಯಿಂದಲೂ ಕಲ್ಮಳೆಯಿಂದಲೂ ನಿಮ್ಮ ಕೈ ದುಡಿತಗಳನ್ನೆಲ್ಲಾ ಹೊಡೆದೆನು; ಅದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಕರ್ತನು ಅನ್ನುತ್ತಾನೆ.
ERVKN ಯಾಕೆ ಹೀಗಾಯಿತು? ಯಾಕೆಂದರೆ ನಾನು ನಿಮ್ಮನ್ನು ಶಿಕ್ಷಿಸಿದೆನು. ನೀವು ನೆಟ್ಟ ಮರಗಳನ್ನು ನಾಶಮಾಡಲು ನಾನು ರೋಗವನ್ನು ಕಳುಹಿಸಿದೆನು. ನಿಮ್ಮ ಕೈ ಕೆಲಸವನ್ನು ಹಾಳುಮಾಡಲು ನಾನು ಆಲಿಕಲ್ಲಿನ ಮಳೆಯನ್ನು ಕಳುಹಿಸಿದೆನು. ನಾನು ಇಷ್ಟೆಲ್ಲಾ ಮಾಡಿದರೂ ನೀವು ಯಾರೂ ನನ್ನ ಬಳಿಗೆ ಬರಲಿಲ್ಲ.’ ಇದು ಯೆಹೋವನ ನುಡಿ.”
IRVKN ನಾನು ನಿಮ್ಮ ದುಡಿತದ ಫಲವನ್ನೆಲ್ಲಾ ಆನೆಕಲ್ಲು ಮಳೆಯಿಂದಲೂ, ಬಿಸಿಗಾಳಿಗೂ ಹಾಳುಮಾಡಿ ನಿಮ್ಮನ್ನು ಬಾಧಿಸಿದರೂ, ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ” ಇದು ಯೆಹೋವನ ನುಡಿ. PEPS