Versions
KNV ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.
ERVKN ಇಸ್ರೇಲ್ ಜನರೇ, ಯೆಹೋವನ ಮಾತಿಗೆ ಕಿವಿಗೊಡಿರಿ! ಈ ದೇಶದಲ್ಲಿ ವಾಸಿಸುವ ಜನರ ವಿರುದ್ಧವಾಗಿ ಯೆಹೋವನು ತನ್ನ ವಾದವನ್ನು ಅವರ ಮುಂದಿಡುತ್ತಾನೆ. “ಈ ದೇಶದಲ್ಲಿರುವ ಜನರು ಯೆಹೋವನನ್ನು ನಿಜವಾಗಿಯೂ ತಿಳಿದಿಲ್ಲ. ಅವರು ಯೆಹೋವನಿಗೆ ಸತ್ಯವಂತರೂ ಅಲ್ಲ. ನಿಷ್ಠಾವಂತರೂ ಅಲ್ಲ.
IRVKN ಇಸ್ರಾಯೇಲರೇ, ಯೆಹೋವನ ವಾಕ್ಯವನ್ನು ಕೇಳಿರಿ;
ಯೆಹೋವನು ದೇಶನಿವಾಸಿಗಳ ಮೇಲೆ ವಿವಾದ ಹಾಕಿದ್ದಾನೆ.
ಏಕೆಂದರೆ ಪ್ರೀತಿ, ಸತ್ಯ, ದೇವಜ್ಞಾನಗಳು ದೇಶದಲ್ಲಿಲ್ಲ.