Versions
KNV ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿ ದರೂ ಯೆಹೂದವು ಅಡ್ಡಿಯಾಗದಿರಲಿ, ಗಿಲ್ಗಾಲಿಗೆ ಹೋಗದೆ ಇಲ್ಲವೆ ಬೇತಾವೆನಿಗೆ ಏರದೆ ಕರ್ತನ ಜೀವದಾಣೆ ಎಂದು ಪ್ರಮಾಣಮಾಡದೆ ಇರ್ರಿ.
ERVKN “ಇಸ್ರೇಲೇ, ನೀನು ಸೂಳೆಯಂತೆ ವರ್ತಿಸುತ್ತೀ. ಆದರೆ ಯೆಹೂದವನ್ನು ತಪ್ಪಿತಸ್ಥಳನ್ನಾಗಿ ಮಾಡಬೇಡ. ಗಿಲ್ಗಾಲಿಗಾಗಲಿ ಬೇತಾವೆನಿಗಾಗಲಿ ಹೋಗದಿರು. ಯೆಹೋವನ ಮೇಲೆ ಆಣೆ ಇಡಬೇಡ. ‘ಯೆಹೋವನಾಣೆ’ ಎಂದು ಹೇಳಬೇಡ.
IRVKN ಇಸ್ರಾಯೇಲೇ, ನೀನು ವ್ಯಭಿಚಾರಿಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ.
ಯೆಹೂದ್ಯರೇ, ಗಿಲ್ಗಾಲಿಗೆ ಸೇರಬೇಡಿರಿ, ಬೇತ್ ಅವೆನಿಗೆ ಯಾತ್ರೆ ಹೋಗಬೇಡಿರಿ,
“ಯೆಹೋವನ ಜೀವದಾಣೆ” ಎಂದು ಶಪಥ ಮಾಡಬಾರದು.